×
Ad

ದೌರ್ಬಲ್ಯಗಳನ್ನು ಮೆಟ್ಟಿ ಅವಕಾಶಗಳನ್ನು ಬಳಸಿ: ಕೋಟ ಶ್ರೀನಿವಾಸ ಪೂಜಾರಿ

Update: 2016-03-08 23:50 IST

ಉಡುಪಿ, ಮಾ.8: ಇಂದಿನ ಶಿಕ್ಷಣದಲ್ಲಿ ಸಾಕಷ್ಟು ಅವಕಾಶಗಳಿವೆ. ದೌರ್ಬಲ್ಯಗಳನ್ನು ಮೆಟ್ಟಿ ನಿಂತು ಅವಕಾಶಗಳನ್ನು ಬಳಸಿಕೊಂಡು ಆತ್ಮಸ್ಥೆರ್ಯ, ಸಾಮರ್ಥ್ಯವನ್ನು ವೃದ್ಧಿಸಿ ಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ನಡೆದ ‘ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ’ದ 300 ವಿದ್ಯಾರ್ಥಿಗಳ ಶೈಕ್ಷಣಿಕ ಸನಿವಾಸ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಶಿಬಿರವನ್ನು ಉದ್ಘಾ ಟಿಸಿದರು. ಉಡುಪಿ ಪ್ರೈಮ್ ಸಂಸ್ಥಾಪಕ ರತ್ನಕುಮಾರ್, ಕಿದಿಯೂರು ನಾಗಲಕ್ಷ್ಮೀ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಜಿ.ರಾವ್, ಅಂಬಲಪಾಡಿ ಎನ್.ರಾಮದಾಸ್ ಬಲ್ಲಾಳ್ ಚಾರಿಟೇಬಲ್ ಟ್ರಸ್ಟ್‌ನ ವಿಶ್ವಸ್ಥೆ ಮೀರಾ ಭಟ್, ಯಕ್ಷಗಾನ ಬಯಲಾಟ ಅಕಾಡಮಿ ಸದಸ್ಯ ಕಿಶನ್ ಹೆಗ್ಡೆ, ಕಲಾರಂಗದ ಉಪಾಧ್ಯಕ್ಷ ಗಂಗಾಧರ್ ರಾವ್ ಉಪಸ್ಥಿತರಿದ್ದರು.

ಅಧ್ಯಕ್ಷ ಕೆ.ಗಣೇಶ್ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾ ವಿಕವಾಗಿ ಮಾತನಾಡಿದರು. ನಾರಾಯಣ ಎಂ.ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News