×
Ad

ಇಂದು ಸಾಹಿತ್ಯ ಪ್ರಶಸ್ತಿ ಪ್ರದಾನ

Update: 2016-03-08 23:57 IST

ಮಂಗಳೂರು, ಮಾ.8: ಕರಾವಳಿ ಲೇಖಕಿಯರ, ವಾಚಕಿಯರ ಸಂಘ ಮತ್ತು ಸಂತ ಆಗ್ನೆಸ್ ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಸಾರಾ ಅಬೂಬಕರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾ.9 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಸಂತ ಆಗ್ನೇಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಅನುಪಮಾ ಪ್ರಸಾದ್ ಅವರಿಗೆ ಡಾ.ಶ್ರೀನಿವಾಸ ಕಕ್ಕಿಲ್ಲಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಯಶ್ರೀ ಕದ್ರಿ ತೀರ್ಪುಗಾರರ ಪ್ರತಿಕ್ರಿಯೆ ನೀಡಲಿದ್ದು, ಪ್ರಾಂಶುಪಾಲೆ ಪ್ರೊ. ಸಿ.ಎಂ. ಸುಪ್ರಿಯ ಎ.ಸಿ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿ, ಯುವ ಲೇಖಕಿ ಕು.ಯಶಸ್ವಿನಿ ಪ್ರತಿಭಾ ಪುರಸ್ಕಾರ ಸ್ವೀಕರಿಸಲಿದ್ದಾರೆ. ಅಪರಾಹ್ನ 2 ಗಂಟೆಗೆ ‘ಹೂ ಅರಳಿದ್ದಕ್ಕೆ ಯಾಕೆ ಸಾಕ್ಷಿ’ ನಾಟಕ ಪ್ರದರ್ಶನಗೊಳ್ಳಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News