ಕೆ.ವಾಸು ಶೆಟ್ಟಿ
Update: 2016-03-09 13:25 IST
ಮೂಡುಬಿದಿರೆ, ಮಾ.9: ತೆಂಕಬೆಟ್ಟು ಗುತ್ತುಮನೆ ಕೆ.ವಾಸು ಶೆಟ್ಟಿ (84) ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ಕಲ್ಲಬೆಟ್ಟು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಸಂಚಾಲಕರಾಗಿ ಮತ್ತು ಕಲ್ಲಬೆಟ್ಟು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ, ಏಳು ಮಂದಿ ಪುತ್ರಿಯರು ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.