×
Ad

ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆಗೆ ಹೈಕೋರ್ಟ್ ತಡೆ

Update: 2016-03-09 22:47 IST

ಬೆಂಗಳೂರು, ಮಾ.9: ಪುತ್ತೂರು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಜಗದೀಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾರಾಯಣಸ್ವಾವಿು ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಜಗದೀಶ್ ಅವರು ಪುತ್ತೂರು ನಗರಸಭೆ ಸದಸ್ಯರಾಗಿದ್ದರೂ ವಿಫ್ ಉಲ್ಲಂಘನೆ ಆರೋಪದ ಹಿನ್ನೆಯಲ್ಲಿ ಅವರ ಮತದಾನದ ಹಕ್ಕನ್ನು ರದ್ದುಪಡಿಸಲಾಗಿತ್ತು. ಹೀಗಾಗಿ, ಅವರಿಗೆ ಪುನಹ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಕಲ್ಪಿಸಿಕೊಡಬೇಕೆಂಬ ವಾದ ಮಂಡಿಸಿದರು. ಪ್ರತಿವಾದಿ ಪರ ವಾದಿಸಿದ ವಕೀಲರು, ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಜಗದೀಶ್ ಅವರು ವಿಫ್‌ನ್ನು ಉಲ್ಲಂಘಿಸಿ ಬಿಜೆಪಿ ಸದಸ್ಯರ ಬೆಂಬಲವನ್ನು ಪಡೆದು ಪುತ್ತೂರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಅವರ ಮತದಾನದ ಹಕ್ಕನ್ನು ರದ್ದುಪಡಿಸಲಾಗಿದೆಯೆಂಬ ಅಂಶಗಳನ್ನು ಕೋರ್ಟ್ ಗಮನಕ್ಕೆ ತಂದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಪುತ್ತೂರು ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ತಡೆಯಾಜ್ಞೆ ನೀಡಿ ಆದೇಶಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News