ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯ ಅಭ್ಯರ್ಥಿ ಚಂದ್ರ ಕುಮಾರ್ ಬೋಸ್
Update: 2016-03-10 12:53 IST
ಹೊಸದಿಲ್ಲಿ, ಮಾ.10: ಮುಂಬರುವ ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಯಲ್ಲಿ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯು ತನ್ನ ಅಭ್ಯರ್ಥಿಯಾಗಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರಿ ಮೊಮ್ಮಗ ಚಂದ್ರ ಕುಮಾರ್ ಬೋಸ್ ಕಣಕ್ಕಿಳಿಸಲಿದೆ.
ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಮತಾ ಬ್ಯಾನರ್ಜಿ ಕೋಲ್ಕತಾದ ಭಾಬಾನಿಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಅದೇ ಕ್ಷೇತ್ರದಿಂದ ಸ್ಪರ್ಧಿಸಲು ಚಂದ್ರಕುಮಾರ್ ಬೋಸ್ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.ಚಂದ್ರಕುಮಾರ್ ಅವರು ಜನವರಿ 25ರಂದು ಬಿಜೆಪಿ ಸೇರ್ಪಡೆಗೊಂಡಿದ್ದರು.