ದರ್ಶನ್ -ಪತ್ನಿ ವಿಜಯಲಕ್ಷ್ಮಿ ಗೆ ರಾಜ್ಯ ಮಹಿಳಾ ಆಯೋಗ ಬುಲಾವ್
ಬೆಂಗಳೂರು, ಮಾ.10 : ಚಾಲೆಂಜಿಂಗ್ ಸ್ಟಾರ್' ದರ್ಶನ್ ಮತ್ತು ಪತ್ನಿ ವಿಯಲಕ್ಷ್ಮಿ ಸಂಸಾರದಲ್ಲಿ ಕಂಡುಬಂದಿರುವ ಸಮಸ್ಯೆಯನ್ನು ಬಗೆಹರಿಸುವ ಉದ್ದೇಶಕ್ಕಾಗಿ ರಾಜ್ಯ ಮಹಿಳಾ ಆಯೋಗವು ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಅವರನ್ನು ಮಾತುಕತೆಗೆ ಆಹ್ವಾನಿಸಿದೆ ಎಂದು ತಿಳಿದು ಬಂದಿದೆ.
ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು ಇಬ್ಬರನ್ನು ಚರ್ಚೆಗೆ ಆಹ್ವಾನಿಸಿದ್ದಾರೆ. ದರ್ಶನ್ ಬರಲು ಒಪ್ಪಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಪತಿ ದರ್ಶನ್ ತಮ್ಮ ಮನೆ ಬಳಿ ಬಂದು ಗಲಾಟೆ ಮಾಡಿದ್ದಾರೆ. ಅವರಿಗೆ ಬುದ್ಧಿವಾದ ಹೇಳಬೇಕೆಂದು ವಿಜಯಲಕ್ಷ್ಮಿ ಅವರು ಬುಧವಾರ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರಿಗೆ ದೂರು ನೀಡಿದದ್ದರು. ಪೊಲೀಸರು ಇಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುವಾರ ದರ್ಶನ್ ಅವರು ಪೊಲೀಸ್ ಠಾಣೆಗೆ ಧಾವಿಸಿ ತನ್ನ ಹೇಳಿಕೆ ನೀಡಿದ್ದಾರೆ. ಪೊಲೀಸರು ಸಂಜೆ ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ಗೆ ಆದೇಶ ನೀಡಿದ್ದಾರೆ. ಈ ನಡುವೆ ದರ್ಶನ್ ತನ್ನ ಪತ್ನಿಯ ವಿರುದ್ಧ ಹಲವು ಗಂಭೀರ ಮಾಡಿದ್ದಾರೆ.
ದರ್ಶನ್ ವಿರುದ್ಧ ಪತ್ನಿ ವಿಜಯಲಕ್ಷ್ಮೀ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಗುರುವಾರ ಸಂಜೆ ವಿಚಾರಣೆಗೆ ಹಾಜರಾಗುವಂತೆ ದರ್ಶನ್ ಗೆ ಆದೇಶ ನೀಡಲಾಗಿದೆ ಎಂದು ಡಿಸಿಪಿ ಲೋಕೇಶ್ ಕುಮಾರ್ ತಿಳಿಸಿದ್ದಾರೆ.
ಐದು ವರ್ಷಗಳ ಹಿಂದೆ ದರ್ಶನ್-ವಿಜಯಲಕ್ಷ್ಮಿ ಸಂಸಾರದಲ್ಲಿ ಬಿರುಕು ಉಂಟಾಗಿತ್ತು. ಪತ್ನಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ದರ್ಶನ್ ಅವರು ಹದಿನಾಲ್ಕು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲುವಾಸ ಅನುಭವಿಸಿ ಹೊರಬಂದಿದ್ದರು. ಬಳಿಕ ಸಚಿವ ಅಂಬರೀಶ್ ಮಧ್ಯಸ್ಥಿಕೆಯಲ್ಲಿ ರಾಜಿ ಪಂಚಾಯತಿಕೆಯ ಮೂಲಕ ಇವರು ಒಂದಾಗಿದ್ದರು.