ಪೆರುವಾಜೆ : ಆಮಂತ್ರಣ ಬಿಡುಗಡೆ
ಸುಳ್ಯ: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು ಎ.6 ರಿಂದ ಎ.19 ರವರೆಗೆ ದೇವಸ್ಥಾನದ ನವೀಕರಣ ಪುನ:ಪ್ರತಿಷ್ಠಾಷ್ಟ್ಠಬಂಧ ಬ್ರಹ್ಮಕಲಶೋತ್ಸವವು ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದಲ್ಲಿ ನಡೆಯಿತು.
ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವದ ನೂತನ ಕಚೇರಿಯನ್ನು ಅವರು ಉದ್ಘಾಟಿಸಿದರು ಹಾಗೂ ಚಪ್ಪರ ಮುಹೂರ್ತವನ್ನು ನೆರವೇರಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎನ್.ಮನ್ಮಥರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಪೆರುವಾಜೆಗುತ್ತು ಅಮರನಾಥ ಶೆಟ್ಟಿ, ಕಾರ್ಯಾಧ್ಯಕ್ಷ ಸತ್ಯನಾರಾಯಣ ಕೋಡಿಬೈಲು,ನಾಗರಾಜ ನಿಡ್ವಣ್ಣಾಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಮಂಜಪ್ಪ ರೈ, ಪಿ.ವೆಂಕಟಕೃಷ್ಣ ರಾವ್, ರಾಮಣ್ಣ ರೈ ವೈಪಾಲ, ದಾಮೋದರ ನಾಕ್, ಶ್ರೀಮತಿ ಸುಜಾತ ಪದ್ಮನಾಭ ಶೆಟ್ಟಿ, ಭಾಮಿನಿ ಜತ್ತಪ್ಪ ಗೌಡ ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉಮೇಶ್ ಕೆ.ಎಂ.ಬಿ. ಸ್ವಾಗತಿಸಿದರು. ಕಾರ್ಯದರ್ಶಿ ಪದ್ಮನಾಭ ನೆಟ್ಟಾರು ವಂದಿಸಿದರು. ಸದಸ್ಯ ಕುಶಾಲಪ್ಪ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಕಲಶೋತ್ಸವದ ಎಲ್ಲಾ ಕೆಲಸ ಕಾರ್ಯಗಳಿಗೆ ಅನುಕೂಲವಾಗಲು ಕಚೇರಿಯ ಉದ್ಘಾಟನೆಯು ನಡೆಯಿತು.