ಬೆಳ್ತಂಗಡಿ: ಗ್ರಾಮ ಪಂಚಾಯತಿನ ಅಧ್ಯಕ್ಷರು,ಉಪಾಧ್ಯಕ್ಷರು ಸೇರಿದಂತೆ 16 ಮಂದಿ ಸದಸ್ಯರುಗಳ ವರ್ಗಾವಣೆಗೆ ಒತ್ತಾಯ
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತಿನ ಅಭಿವೃದ್ದಿ ಅಧಿಕಾರಿ ಪಂಚಾಯತು ಸದಸ್ಯರೊಂದಿಗೆ ಮತ್ತು ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ ಅಬಿವೃದ್ದಿ ಕಾರ್ಯಗಳಿಗೆ ತೊಡಕನ್ನುಂಟು ಮಾಡುತ್ತಿದ್ದು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಹಾಗೂ ಅವರನ್ನು ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯತು ಸದಸ್ಯರುಗಳು ಬೆಳ್ತಂಗಡಿ ಶಾಸಕ ಕೆ ವಸಂತ ಬಂಗೇರ ಅವರಿಗೆ ಹಾಗೂ ತಾಲೂಕು ಪಂಚಾಯತು ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.
ಕಳೆದ ಎರಡು ವರ್ಷಗಲಿಂದ ಅಭಿವೃದ್ದಿ ಅಧಿಕಾರಿಯಾಗಿರುವ ನಾಗೇಶ ಎಂ ಅವರು ಗ್ರಾ. ಪಂ ಅಧ್ಯಕ್ಷರ ಮಾತಿಗಾಗಲಿ ಸದಸ್ಯರ ಮಾತಿಗಾಗಲಿ ಯಾವುದೇ ಬೆಲೆ ಕೊಡದೆ ತನಗೆ ಇಷ್ಟ ಬಂದ ರೀತಿಯಲ್ಲಿ ಏಕ ಪಕ್ಷೀಯವಾದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾ ಹೋಗುತ್ತಿದ್ದು ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ. ಅಲ್ಲದೆ ಅಭಿವೃದ್ದಿ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಸದಸ್ಯರುಗಳು ಆರೋಪಿಸಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯತಿನ ಅಧ್ಯಕ್ಷರು ಉಪಾಧ್ಯಕ್ಷರು ಸೇರಿದಂತೆ ಎಲ್ಲ 16 ಮಂದಿ ಸದಸ್ಯರುಗಳು ಅವರ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿದ ಶಾಸಕರು ಅಗತ್ಯ ಕ್ರಮ ಕೈಗೊಳ್ಳುವಂತೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ. ಗ್ರಾ. ಪಂ ಅಧ್ಯಕ್ಷ ಗೋಪಾಲಕೃಷ್ಣ ಕೆ, ಸದಸ್ಯರುಗಳು ಉಪಸ್ಥಿತರಿದ್ದರು.