ಇರಾ: ಬ್ಯಾಂಕ್‌ನ ಭದ್ರತಾ ಕೊಠಡಿ ಹಾಗು ಲಾಕರ್ ಉದ್ಘಾಟನೆ
ಇರಾದಲ್ಲಿರುವ ವ್ಯವಸಾಯ ಸಹಕಾರಿ ಬ್ಯಾಂಕ್‌ನಲ್ಲಿ ಭದ್ರತಾ ಕೊಠಡಿ ಹಾಗೂ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ಕೊಣಾಜೆ: ಮಂಚಿ ವ್ಯವಸಾಯ ಸಹಕಾರಿ ಬ್ಯಾಂಕ್ ಇರಾ ಶಾಖೆ ಇದರ ನವೀಕೃತ ಕಟ್ಟಡದಲ್ಲಿ ಭದ್ರತಾ ಕೊಠಡಿ ಹಾಗೂ ಸೇಫ್ ಡೆಪಾಸಿಟ್ ಲಾಕರ್ ಉದ್ಘಾಟನಾ ಸಮಾರಂಭ ಗುರುವಾರ ನಡೆಯಿತು.
ಭದ್ರತಾ ಕೊಠಡಿಯನ್ನು ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ಉದ್ಘಾಟಿಸಿದರು. ಸೇಫ್ ಡೆಪಾಸಿಟ್ ಲಾಕರನ್ನು ಮಂಚಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೀಳಾ ಅವರು ಉದ್ಘಾಟಿಸಿದರು. ಬಳಿಕ ಇರಾ ಮಲೆಯಾಳಿ ಬಿಲ್ಲವ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕ್‌ನ ಅಧ್ಯಕ್ಷರಾದ ಉಮ್ಮರ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯರಾದ ಚಂದ್ರಹಾಸ್ ಕರ್ಕೇರ, ಎಸ್‌ಡಿಸಿಸಿ ಬ್ಯಾಂಕ್‌ನ ಮೇಲ್ವಿಚಾರಕರಾದ ಯೋಗಿಶ್, ಮಂಚಿ ಗ್ರಾಮ ಪಮಚಾಯಿತಿ ಉಪಾಧ್ಯಕ್ಷರಾದ ಮೋಹನ್‌ದಾಸ್ ಶೆಟ್ಟಿ, ವಿಎಸ್‌ಎಸ್‌ನ ಬ್ಯಾಂಕ್‌ನ ಉಪಾಧ್ಯಕ್ಷರಾದ ಭಾಗೀರಥಿ, ಬ್ಯಾಂಕಿನ ಮಾಜಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶ್ ಪ್ರತಾಪ್, ಬ್ಯಾಂಕ್‌ನ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಸಂಪಿಲ ಅವರು ಉಪಸ್ಥಿತರಿದ್ದರು. ಬ್ಯಾಂಕ್‌ನ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಶೆಟ್ಟಿ ಸ್ವಾಗತಿಸಿ, ನಿರ್ದೇಶಕರಾದ ದಿವಕರ್ ನಾಯಕ್, ಪುಷ್ಪರಾಜ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.