×
Ad

ವಿದ್ಯಾನಗರ: ಅಗ್ನಿ ಅನಾಹುತ

Update: 2016-03-10 23:25 IST

ಕಾಸರಗೋಡು, ಮಾ.10: ವಿದ್ಯಾನಗರ ಠಾಣಾ ಪರಿಸರದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಅಗ್ನಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
  ಪರಿಸರದ ಹುಲ್ಲು, ಪೊದೆ ಹಾಗೂ ಮಾಲಿನ್ಯ ರಾಶಿಗೆ ಬೆಂಕಿ ತಗಲಿದ್ದು, ಹಲವು ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾಹನಗಳು ಇಲ್ಲಿದ್ದವು. ಆದರೆ ವಾಹನಗಳಿಗೆ ಹಾನಿ ಸಂಭವಿಸಿಲ್ಲ. ಪೊಲೀಸರು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಪ್ರಯೋಜನವಾಗಲಿಲ್ಲ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದವರು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News