ಮಂಗಳೂರು: ದ್ವಿತೀಯ ಪಿ.ಯು.ಸಿ ಪರೀಕ್ಷೆ:24 ವಿದ್ಯಾರ್ಥಿಗಳು ಗೈರು
ಮಂಗಳೂರು,ಮಾ.11:ಇಂದು ಆರಂಭವಾದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ಯಲ್ಲಿ ದ.ಕ ಜಿಲ್ಲೆಯಲ್ಲಿ ಮೊದಲ ದಿನ 24 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.
ಜೀವಶಾಸ್ತ್ರ ವಿಷಯದ ಪರೀಕ್ಷೆಗೆ 8266 ವಿದ್ಯಾರ್ಥಿಗಳು ಹಾಜರಾಗಿ, 23 ಮಂದಿ ಗೈರು ಹಾಜರಾಗಿದ್ದಾರೆ. ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ 872 ದ್ಯಾಥಿಗಳು ಹಾಜರಾಗಿದ್ದು, 1 ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
52 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಈ ವರ್ಷ 34760 ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಇವರಲ್ಲಿ 17352 ಹುಡುಗರು ಹಾಗೂ 17408 ಹುಡುಗಿಯರಿದ್ದಾರೆ. ಕಲಾ ಭಾಗದಲ್ಲಿ 5882, ವಾಣಿಜ್ಯ ಭಾಗದಲ್ಲಿ 15767 ಹಾಗೂ ವಿಜ್ಞಾನ ವಿಭಾಗದಲ್ಲಿ 13111 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 31363 ಪ್ರಥಮ ಬಾರಿಗೆ, 1077 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 2320 ಮಂದಿ ಖಾಸಗಿಯಾಗಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.