×
Ad

ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

Update: 2016-03-11 20:17 IST

ಮಂಗಳೂರು,ಮಾ.11:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‌ಗಳ ಸಹಯೋಗದೊಂದಿಗೆ ಮಾ. 15 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಸುಳ್ಯ ತಾಲೂಕಿನ ಬೆಳ್ಳಾರೆ, ಮಂಗಳೂರು ತಾಲೂಕಿನ ಶಿರ್ತಾಡಿ, ಮಾ. 16 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಬಂಟ್ವಾಳ ತಾಲೂಕಿನ ವಿಟ್ಲ ಹಾಗೂ ಮಾ. 19 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News