×
Ad

ಕಲ್ಕುರಿಪದವು: ಬಾವಿಗೆ ಬಿದ್ದು ಮೃತ್ಯು

Update: 2016-03-11 23:06 IST

ಬಂಟ್ವಾಳ, ಮಾ. 11: ತಾಲೂಕಿನ ಕರ್ಪೆ ಸಮೀಪದ ಕಲ್ಕುರಿಪದವು ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಸ್ಥಳೀಯ ನಿವಾಸಿ ಹಿಲರಿ ಡಿಸೋಜ(80) ಮೃತ ವ್ಯಕ್ತಿ. ಅವಿವಾಹಿತರಾಗಿದ್ದ ಇವರು ಇಲ್ಲಿನ ಸಹೋದರನ ಮನೆಯಲ್ಲಿ ವಾಸವಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News