ಪಾಲನಾ-ರಕ್ಷಣಾ ಸಂಸ್ಥೆಗಳ ನೋಂದಣಿಗೆ ಸೂಚನೆ
Update: 2016-03-11 23:25 IST
ಉಡುಪಿ, ಮಾ.11: ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗೆ ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ಎಲ್ಲ ರೀತಿಯ ಮಕ್ಕಳ ಹಾಗೂ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲ ನ್ಯಾಯ ಕಾಯ್ದೆ 2000, ತಿದ್ದುಪಡಿ ಕಾಯ್ದೆ 2006ರನ್ವಯ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.
ನೋಂದಣಿ ಮಾಡಿಸಿಕೊಳ್ಳದಿರುವ ಸರಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ಒಂದು ತಿಂಗಳೊಳಗೆ ನೋಂದಣಿಗೆ ಪ್ರಸ್ತಾವನೆಯನ್ನು ಸಲ್ಲಿಸಿ, ನೋಂದಣಿಯಾಗಿರುವ ಸಂಸ್ಥೆಗಳು ನೋಂದಣಿಯ ಅವಧಿ ಮುಗಿದಿದ್ದಲ್ಲಿ ಕೂಡಲೇ ನವೀಕರಣ ಮಾಡಿಕೊಳ್ಳಬೇಕು. ತಪ್ಪಿದಲ್ಲಿ ಸಂಸ್ಥೆಯನ್ನು ರದ್ದುಪಡಿಸಲು ಕ್ರಮ ಜರಗಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.