ಇಂದು ದೇರಳಕಟ್ಟೆಯಲ್ಲಿ ತಾ.ಪಂ ಜಿ.ಪಂ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
Update: 2016-03-12 20:13 IST
ಉಳ್ಳಾಲ. ಮಾ, 12: ಉಳ್ಳಾಲ ಬ್ಲಾಕ್ ಕಾಂಗ್ರೆಸ್, ಉಳ್ಳಾಲ ಯೂತ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್, ಅಲ್ಪ ಸಂಖ್ಯಾತ ಘಟಕ ಇದರ ಆಶ್ರಯದಲ್ಲಿ ತಾ.ಪಂ ಜಿ.ಪಂ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಮಾ.13 (ಇಂದು) ಭಾನುವಾರ ಸಂಜೆ ದೇರಳಕಟ್ಟೆಯ ಸಿಟಿ ಗ್ರೌಂಡ್‌ನಲ್ಲಿ ನಡೆಯಲಿದೆ.
ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಆರ್ ಸುಂದರ್ಶನ್ ಮುಖ್ಯ ಪ್ರಭಾಷಣ ಮಾಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆರೋಗ್ಯ ಸಚಿವ ಯು.ಟಿ ಖಾದರ್, ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಭಾಗವಹಿಸಲಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.