144 ಫಲಾನುಭವಿಗಳಿಗೆ ಆದೇಶಪತ್ರಗಳ ವಿತರಣೆ
ಬೆಂಗಳೂರು, ಮಾ.12: ಪಿಂಚಣಿ ಮತ್ತು ಕಂದಾಯ ಅದಾಲತ್ ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜ ನಿಕರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶ ಶಶಿಕಾಂತ್ ಬಿ.ಭಾವಿಕಟ್ಟಿ ಕರೆ ನೀಡಿದ್ದಾರೆ.
ಶನಿವಾರ ಬೆಂಗಳೂರು ಪೂರ್ವ ತಾಲೂಕಿನ ಹೊರಮಾವು ನಾಡ ಕಚೇರಿ ಆವರಣದಲ್ಲಿ ನ್ಯಾಯಾಂಗ ಮತ್ತು ಕಂದಾಯ ಇಲಾಖೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಮತ್ತು ಕಂದಾಯ ಅದಾಲತ್‌ನಲ್ಲಿ ಅವರು ಮಾತನಾಡಿದರು.
ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನಿರ್ದೇಶನದಂತೆ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊ ಳ್ಳಬಹುದಾಗಿದೆ. ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ತಹಶೀಲ್ದಾರ್ ಡಾ.ಬಿ.ಆರ್.ಹರೀಶ್‌ನಾಯಕ್ ಮಾತನಾಡಿ, ರೈತರ ಪಹಣಿಗಳಲ್ಲಿನ ಸಣ್ಣಪುಟ್ಟ ದೋಷ ಗಳನ್ನು ಆಕಾರ್ ಬಂದ್ ನಂತೆ ಹಾಗೂ ಹಳೆ ಕೈ ಬರಹದ ಪಹಣಿ ಮ್ಯುಟೇಷನ್‌ಗೂ ಚಾಲ್ತಿ ಸಾಲಿನ ಪಹಣಿಯಲ್ಲಿನ ವ್ಯತ್ಯಾಸವಿದ್ದಲ್ಲಿ ಪರಿಹರಿಸುವುದಾಗಿ ತಿಳಿಸಿದರು. ಸಾಮಾಜಿಕ ಭದ್ರತೆ ಯೋಜನೆ ಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಒಂದು ತಿಂಗಳ ಒಳಗಾಗಿ ಮಂಜೂ ರಾತಿ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ 144ಕ್ಕೂ ಹೆಚ್ಚು ಫಲಾನುಭವಿಗಳಿಗೆ ಇದೇ ಸಂದರ್ಭದಲ್ಲಿ ಮಂಜೂರಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು.
ಕೆ.ಆರ್.ಪುರ, ಹೊರಮಾವುಮತ್ತು ಮಹದೇವಪುರ ರಾಜಸ್ವನಿರೀಕ್ಷಕರ ವೃತ್ತಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳಿಗೆ ಸಂಬಂಧಿಸಿದಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿತ್ತು. ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ತಾಲೂಕಿನ ಉಪತಹಶೀಲ್ದಾರ್‌ಗಳು, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.