ಮರ್ಧಾಳ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ
Update: 2016-03-13 13:21 IST
ಕಡಬ, ಮಾ.13: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎಂ.ಎಸ್.ಡಬ್ಲು ವಿಭಾಗದ ವತಿಯಿಂದ ಮರ್ಧಾಳ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಗ್ರಾಮೀಣ ಅಧ್ಯಯನ ಶಿಬಿರದ ಪ್ರಯುಕ್ತ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ ಪ್ರಾಯೋಜಕತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ರವಿವಾರ ಮರ್ಧಾಳದ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಯುವ ಉದ್ಯಮಿ ಶಿವಪ್ರಸಾಕ್ ಕೈಕುರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸುಳ್ಯದ ಎ.ಒ.ಎಲ್.ಇ.(ರಿ.) ಇದರ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಅವರು ಆರೋಗ್ಯ ಹಾಗೂ ವಿವಿಧ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮರ್ಧಾಳ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಎಂ., ಶ್ರೀನಿವಾಸ ರೈ ಮುಂಡ್ರಾಡಿ, ಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.