×
Ad

ಉಳ್ಳಾಲ: ಅಪರಿಚಿತ ವ್ಯಕ್ತಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವು

Update: 2016-03-14 18:26 IST

ಉಳ್ಳಾಲ: ಕುಸಿದು ಬಿದ್ದು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲ್ಟಟ್ಟಿದ್ದ ಸುಮಾರು 55ರಿಂದ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಾರ್ಚ್ 12ರಂದು ಸಾವನ್ನಪ್ಪಿದ್ದಾರೆ.

ಅಶೋಕ್ ಎಂದು ಕರೆಯಲ್ಪಡುತ್ತಿದ್ದ ಅಪರಿಚಿತ ವ್ಯಕ್ತಿ ಉಳ್ಳಾಲ ಬೀಚ್ ಹತ್ತಿರ ಗುಜರಿ ಹೆಕ್ಕುತ್ತಿರುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. ತಕ್ಷಣವೇ ಇವರನ್ನು ಸಾರ್ವಜನಿಕರ ಸಹಾಯದಿಂದ 108 ಅಂಬುಲೆನ್ಸ್ ವಾಹನದಲ್ಲಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News