ಬಂಟ್ವಾಳ: ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ
Update: 2016-03-14 20:48 IST
ಬಂಟ್ವಾಳ, ಮಾ. 14: ಇಲ್ಲಿನ ಪುರಸಭೆಯ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಮತ್ತು ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು ಅವರ ಪದಗ್ರಹಣ ಕಾರ್ಯಕ್ರಮ ಸೋಮವಾರ ಬೆಳಗ್ಗೆ ಪುರಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಪುರಸಭೆಯ ಸರ್ವ ಸದಸ್ಯರು, ಪ್ರಮುಖರು, ಜನ ಪ್ರತಿನಿಧಿಗಳು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಶು ಹಾರೈಸಿದರು. ಪುರಸಭಾ ಮುಖ್ಯಾಧಿಕಾರಿ ಸುಧಾಕರ ಭಟ್ ಸ್ವಾಗತಿಸಿ ವಂದಿಸಿದರು.