ಬಿಎಸ್‌ವೈ ಪುತ್ರಿಗೆ ಅಕ್ರಮ ನಿವೇಶನ ಮಂಜೂರು ಪ್ರಕರಣ: ಹೈಕೋರ್ಟ್ ತಡೆ

Update: 2016-03-14 17:17 GMT

ಬೆಂಗಳೂರು, ಮಾ.14: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಪುತ್ರಿಗೆ ಶಿವಮೊಗ್ಗದಲ್ಲಿ ಅಕ್ರಮವಾಗಿ ನಿವೇಶನ ಮಂಜೂರು ಮಾಡಲಾಗಿದೆ ಎಂದು ದೂರಿ ಲೋಕಾಯುಕ್ತಕ್ಕೆ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಡಿ.ವೈಂಗಣಕರ್ ಅವರಿದ್ದ ನ್ಯಾಯಪೀಠ. ಈ ಆದೇಶ ನೀಡಿದೆ. ಬಿಎಸ್‌ವೈ ಪುತ್ರಿ ಎಸ್.ವೈ.ಅರುಣಾದೇವಿ ಅವರಿಗೆ ಶಿವಮೊಗ್ಗ ಹೊರವಲಯದಲ್ಲಿರುವ ಕಲ್ಲಹಳ್ಳಿ ಬಡಾವಣೆಯಲ್ಲಿ ಕಾರ್ಯನಿರತ ಪತ್ರಕರ್ತರ ಕೋಟಾದಡಿ 50/80 ಅಳತೆಯ ನಿವೇಶನ ಮಂಜೂರು ಮಾಡಲಾಗಿದೆ. ಅಲ್ಲದೇ ಅಕ್ರಮವಾಗಿ ನೋಂದಣಿ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಶಿವಮೊಗ್ಗದ ವಕೀಲ ವಿನೋದ ಎಂಬುವವರು ನ್ಯಾಯಾಲಯದ ಮಟ್ಟಿಲೇರಿದ್ದರು. ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯವು ಪ್ರಕರಣವನ್ನು ತನಿಖೆಗಾಗಿ ಲೋಕಾಯುಕ್ತ ಪೊಲೀಸರಿಗೆ ಶಿಫಾರಸು ಮಾಡಿತ್ತು. ಪ್ರಕರಣದಲ್ಲಿ ಬಿಎಸ್‌ವೈ ಹಾಗೂ ಅವರ ಪುತ್ರಿ ಅರುಣಾದೇವಿ, ಆಗಿನ ಕರ್ನಾಟಕ ಹೌಸಿಂಗ್ ಬೋರ್ಡ್ ಕಮಿಷನರ್ ದ್ಯಾಬೇರಿ, ಶಿವಶಂಕರ್, ಕೃಷ್ಣಾ, ಸಂದೇಶಗೌಡ, ಮಂಜುನಾಥ್ ಎಂಬುವರನ್ನೂ ಈ ಪ್ರಕರಣದ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಇದನ್ನುಪ್ರಶ್ನಿಸಿಬಿಎಸ್‌ವೈ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾ ರಣೆ ನಡೆಸಿದ ನ್ಯಾಯಪೀಠವು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಗೆ ಮಧ್ಯಾಂತರ ತಡೆಯಾಜ್ಞೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News