ಕಾರ್ಕಳ: ಎಂ.ಪಿ.ಎಂ. ಕಾಲೇಜು ವಾರ್ಷಿಕೋತ್ಸವ
ಕಾರ್ಕಳ: ಸ್ಥಳೀಯ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವವು ಸೋಮವಾರ ನಡೆಯಿತು. ಮುಖ್ಯ ಅತಿಥಿಯಾಗಿ ಬಳ್ಳಾರಿ ಕೂಡ್ಲಿಗಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಪ್ರೊ. ಸಿ. ಜಿ. ಜೀಲನ್ ಖಾನ್ ಉಪಸ್ಥಿತರಿದ್ದರು. ಮಂಗಳೂರು ಪ್ರಾದೇಶಿಕ ಕಛೇರಿ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ. ಹೆಚ್. ಕೆ. ಶಿವಮೂರ್ತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ವರ್ಷದಲ್ಲಿ ಮಂಗಳೂರು ವಿ.ವಿ. ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಬಿಬಿಎಂ ವಿಭಾಗದ ರಾಕೇಶ್ ನಾಯಕ್, ನಿತೇಶ್ ಜಿ, ಗುರುರಾಜ್ ಹಾಗೂ ಎಂ.ಕಾಂ. ವಿಭಾಗದ ದೀಪಿಕಾ ಕಾಮತ್ ಮತ್ತು ಕೀರ್ತಿ ಅವರನ್ನು ಸನ್ಮಾನಿಸಲಾಯಿತು. ವಿಶೇಷ ಸಾಧನೆಗೈದ ವಿದ್ಯಾಥಿಗಳನ್ನು ಗೌರವಿಸಲಾಯಿತು. ಪ್ರಾಂಶುಪಾಲ ಪ್ರೊ. ಶ್ರೀವರ್ಮ ಅಜ್ರಿ ವಾರ್ಷಿಕ ವರದಿ ವಾಚಿಸಿದರು. ರಕ್ಷಿತ್ ಸ್ವಾಗತಿಸಿದರು. ರಮೇಶ್ ಮತ್ತು ಅನುಷಾ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಎಲ್. ಜೆ. ವಂದಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕ ವೃಂದ, ಹಳೆವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.