ಕಾರ್ಕಳ: ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ
Update: 2016-03-15 18:01 IST
ಕಾರ್ಕಳ: ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸೋಮವಾರ ಧರ್ಮಸ್ಥಳದಲ್ಲಿ ನಡೆದ ಜ್ಞಾನ ಸಿಂಧು ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾರ್ಥನಾ ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ಕಾರ್ಕಳದ ಭುವನೇಂದ್ರ ವಿದ್ಯಾಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಮಹತೀ. ಕೆ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಅವರು ಕಾರ್ಕಳದ ಡಾ. ಅರುಣ ಕುಮಾರ್ ಎಸ್. ಆರ್ ಹಾಗೂ ಪೂರ್ಣಿಮಾ ದಂಪತಿಯ ಪುತ್ರಿ.