×
Ad

ಕೊಣಾಜೆ : ಝೇಂಕಾರ-2016 ; ಬೆಸೆಂಟ್ ಸಂಧ್ಯಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

Update: 2016-03-15 18:27 IST
ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಝೇಂಕಾರ 2016 ಅಂತರ್ ಪದವಿ ಕಾಲೇಜು ಸಾಂಸ್ಕೃತಿಕ ಹಬ್ಬದಲ್ಲಿ ಬೆಸೆಂಟ್ ಸಂಧ್ಯಾ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ಕೊಣಾಜೆ   : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಆಶ್ರಯದಲ್ಲಿ ಶನಿವಾರ ನಡೆದ ಝೇಂಕಾರ 2016 ಅಂತರ್ ಪದವಿ ಕಾಲೇಜು ಸಾಂಸ್ಕೃತಿಕ ಹಬ್ಬದಲ್ಲಿ ಬೆಸೆಂಟ್ ಸಂಧ್ಯಾ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

   ಪುತ್ತೂರಿನ ಸರ್ಕಾರಿ ಮಹಿಳಾ ಕಾಲೇಜು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧಾ ಕಾರ್ಯಕ್ರಮದಲ್ಲಿ ಜನಪದ ನೃತ್ಯ, ರಸಪ್ರಶ್ನೆ, ಅಣುಕು ಮಾಧ್ಯಮ, ಛದ್ಮವೇಷ, ಸವಿಗನ್ನಡ, ಡ್ರಾಯಿಂಗ್, ಹೂ ಜೋಡನೆ, ಪ್ರಬಂಧ, ಕಾವ್ಯರಚನೆ ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

     ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಬಹುಮಾನ ವಿತರಣೆ ನಡೆಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಪ್ರೊ. ಹೈದರಾಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಡಾ. ಗಿರಿಧರ್ ರಾವ್ ಎಂ.ಎಸ್. ಅಧ್ಯಕ್ಷತೆ ವಹಿಸಿದ್ದರು. ಲೋಕೇಶ್ ಹಾಗೂ ಸುಶ್ಮಿತಾ ನಿರೂಪಿಸಿದರು. ಕಾರ್ಯಕ್ರಮ ಸಂಯೋಜಕ ನಂದಕಿಶೋರ್ ಎಸ್. ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News