ಸಾಮಾಜಿಕ ನ್ಯಾಯ ಕೋರಿ ರಿಟ್ ಅರ್ಜಿ ಸಲ್ಲಿಕೆ
Update: 2016-03-15 23:04 IST
ಬೆಂಗಳೂರು, ಮಾ.15: ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ.
ಈ ಅರ್ಜಿಯನ್ನು ವಕೀಲ ವೀರಭದ್ರಯ್ಯ ಸಲ್ಲಿಸಿದ್ದು, ಮೇಲ್ಜಾತಿಯವರನ್ನೇ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುತ್ತಿದ್ದಾರೆ. ಇದರಿಂದ, ಅಹಿಂದ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಅನ್ಯಾಯಕ್ಕೆ ತಡೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಕೇಡರ್ ಆದೇಶದಂತೆ ನ್ಯಾಯಮೂರ್ತಿಗಳ ನೇಮಕಾತಿ ನಡೆಯಬೇಕಾಗಿದ್ದು, ಅರ್ಜಿ ನ್ಯಾಯಪೀಠದ ಮುಂದೆ ಬರುವವರೆಗೆ ಯಾವುದೇ ರೀತಿಯ ಮಾಹಿತಿ ಸೋರಿಕೆಗೆ ಅವಕಾಶ ನೀಡುವುದಿಲ್ಲ ಎಂದು ವಕೀಲರು ತಿಳಿಸಿದ್ದಾರೆ.