ಪ್ಲಾಸ್ಟಿಕ್ ನಿಷೇಧ: ಸರಕಾರದ ಆದೇಶ

Update: 2016-03-15 17:37 GMT

ಬೆಂಗಳೂರು, ಮಾ. 15: ಪರಿಸರಕ್ಕೆ ಹಾನಿಕಾರಕವಾಗಿರುವ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆ ಮಾಡದಂತೆ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ
ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಹಾಗೂ ದೈನಂದಿನ ಬಳಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ದೀರ್ಘಾವಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡಲು ಕಾರಣವಾಗಿರುತ್ತದೆ. ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚಗಳು, ಕ್ಲಿಂಗ್ ಫಿಲ್ಮ್ಸ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತು ಥರ್ಮೋಕೋಲ್‌ನಿಂದ ತಯಾರಿಸುವ ಪ್ಲಾಸ್ಟಿಕ್‌ನ್ನು ಬಳಸದಂತೆ ನಿಷೇಧಿಸಲಾಗಿದೆ
ಪ್ಲಾಸ್ಟಿಕ್ ತ್ಯಾಜ್ಯಗಳು ಜಲಕಾಯಗಳ ಮಾಲಿನ್ಯಕ್ಕೆ ಕಾರಣವಾಗುವ ದೃಷ್ಟಿಯಿಂದ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News