ಅರ್ಜಿ ಆಹ್ವಾನ
Update: 2016-03-15 23:36 IST
ಬೆಂಗಳೂರು,ಮಾ. 15: ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು (ಗ್ರೂಪ್-ಎ) ಮತ್ತು ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್-ಬಿ) ವೃಂದದ ಒಟ್ಟು 162 ಹುದ್ದೆಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗ ಅಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಮಾ.14ರಿಂದ ಎ.16ರವರೆೆಗೆ ಕಾಲಾವಕಾಶ ನೀಡಲಾಗಿದೆ. ಹೆಚ್ಚಿನ ವಿವರಗಳಿಗೆ ಆಯೋಗದ ವೆಬ್‌ಸೈಟ್ kpsc.kar.nic.in/Notification ಸಂಪರ್ಕಿಸಲು ಪ್ರಕಟನೆಯಲ್ಲಿ ಕೋರಲಾಗಿದೆ.