×
Ad

ಮಂಗಳೂರು ವಿವಿ ಅಂತರ್ ಕಾಲೇಜು ಪುರುಷರ ಖೋ ಖೋ ಪಂದ್ಯ

Update: 2016-03-15 23:45 IST

 ಸುಳ್ಯ, ಮಾ.15: ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಪುರುಷರ ಖೋ ಖೋ ಪಂದ್ಯದಲ್ಲಿ ಆಳ್ವಾಸ್ ತಂಡ 11ನೆ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕಾಲೇಜಿನ ಪ್ರಾಂಶುಪಾಲ ಪದ್ಮನಾಭ ನೆಟ್ಟಾರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಬಹುಮಾನ ವಿತರಿಸಿದರು. ಸದಸ್ಯ ರಮಾನಂದ ರೈ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಾಧಾಕೃಷ್ಣ ಮಾಣಿಬೆಟ್ಟು, ಮಂಗ ಳೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಅತಿಥಿಗಳಾಗಿದ್ದರು. ದಕ್ಷಿಣ ಭಾರತ ಮಟ್ಟದ ವಿಶ್ವವಿದ್ಯಾನಿಲಯಗಳ ಪುರುಷರ ಖೋ ಖೋ ಪಂದ್ಯಾಟದಲ್ಲಿ ಚಾಂಪಿಯನ್ ಆದ ಮಂಗಳೂರು ವಿವಿ ತಂಡದ ಆಟಗಾರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಉಪನ್ಯಾಸಕ ರಾಮಚಂದ್ರ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ ಕುಮಾರ್ ಕೊಯಿಂಗಾಜೆ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅಚ್ಯುತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. *ಆಳ್ವಾಸ್‌ಗೆ ಪ್ರಶಸ್ತಿ: ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡ ಮಂಗಳೂರು ವಿವಿ ಕ್ಯಾಂಪಸ್ ಕಾಲೇಜು ತಂಡವನ್ನು 9-4, 8-5 ಅಂಕಗಳಿಂದ ಸೋಲಿಸಿ ಸತತ 11ನೆ ಬಾರಿಗೆ ಚಾಂಪಿಯನ್ ಪಟ್ಟ ಪಡೆದು, ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ತನ್ನದಾಗಿಸಿತು. ಮಂಗಳೂರು ವಿವಿ ಕ್ಯಾಂಪಸ್ ತಂಡ ದ್ವಿತೀಯ, ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ತಂಡ ತೃತೀಯ ಹಾಗೂ ಆಳ್ವಾಸ್ ಬಿಪಿಎಡ್ ತಂಡ ಚತುರ್ಥ ಬಹುಮಾನ ಪಡೆದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News