ಉಡುಪಿ: ಮರುಳುನೀತಿ ಗೊಂದಲದ ವಿರುದ್ಧ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಪ್ರತಿಭಟನೆ
Update: 2016-03-16 11:33 IST
ಉಡುಪಿ, ಮಾ.16: ಸರಕಾರವು ಉಡುಪಿ ಜಿಲ್ಲೆಯಲ್ಲಿ ಮರಳು ನೀತಿಯಲ್ಲಿ ಗೊಂದಲ ಮೂಡಿಸಿದ್ದು, ಇದರಿಂದ ಸಾರ್ವಜನಿಕರು ತೊಂದರೆಗೆ ಒಳಗಾಗಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ ನಿರ್ಲಕ್ಷ ವಹಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಸಿತು.
ಸರಕಾರ ಹಾಗೂ ಜಿಲ್ಲಾಡಳಿತ ಮರಳು ನೀತಿಯ ಬಗ್ಗೆ ಸ್ಪಷ್ಟ ನಿಲುವ ತಾಳದಿರುವುದರಿಂದ ಉಂಟಾಗಿರುವ ಗೊಂದಲದಿಂದಾಗಿ ಕರಾವಳಿ ಜಿಲ್ಲಾದ್ಯಂತ ಮನೆ ಸಹಿತ ಇತರ ನಿರ್ಮಾಣ ಕಾರ್ಯಗಳಿಗೆ ಮರಳು ಸಿಗದೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದುದರಿಂದ ಸರಕಾರ ಈ ಬಗ್ಗೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಪ್ರತಿಭಟನಕಾರರನ್ನುದ್ದೇಶಿಸಿ ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿದರು.
ಬಳಿಕ ಈ ಬಗ್ಗೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು