×
Ad

ಇಂಗ್ಲೆಂಡ್ ವಿರುದ್ಧ ವಿಂಡೀಸ್‌ಗೆ 6 ವಿಕೆಟ್‌ಗಳ ಜಯ

Update: 2016-03-16 23:09 IST


ಮುಂಬೈ, ಮಾ.16: ಆರಂಭಿಕ ದಾಂಡಿಗ ಕ್ರಿಸ್ ಗೇಲ್ ಶತಕ ನೆರವಿನಲ್ಲಿ ವೆಸ್ಟ್‌ಇಂಡೀಸ್ ತಂಡ ಇಲ್ಲಿ ನಡೆದ ಟ್ವೆಂಟಿ-20 ವಿಶ್ವಕಪ್‌ನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್‌ಗಳ ಜಯ ಗಳಿಸಿದೆ.
ಗೆಲುವಿಗೆ 183 ರನ್‌ಗಳ ಕಠಿಣ ಸವಾಲನ್ನು ಪಡೆದ ವಿಂಡಿಸ್ ತಂಡ ಇನ್ನೂ 11 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ ಅಗತ್ಯದ ರನ್ ಗಳಿಸಿ ಗೆಲುವಿನ ದಡ ಸೇರಿತು.
ಗೇಲ್ ಔಟಾಗದೆ  100  ರನ್( 48ಎ, 5ಬೌ, 11ಸಿ) ಗಳಿಸಿದರು. ಸ್ಯಾಮುಯೆಲ್ಸ್ 37 ರನ್ ಗಳಿಸಿದರು.
ಇದಕ್ಕೂ ಮೊದಲು ಇಂಗ್ಲೆಂಡ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 182 ರನ್ ಗಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News