ವಿಟ್ಲ : ಮಾ 20 ರಂದು ಮೆಲ್ಕಾರ್‌ನಲ್ಲಿ ಸೌಹಾರ್ದ ರಕ್ತದಾನ ಶಿಬಿರ
Update: 2016-03-17 17:16 IST
ವಿಟ್ಲ : ಬಂಟ್ವಾಳ ತಾಲೂಕು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್, ಮೆಲ್ಕಾರ್ ರಿಕ್ಷಾ ಚಾಲಕ-ಮಾಲಕರ ಸಂಘ, ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೌಹಾರ್ದ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ಮಾ. 20 ರಂದು ಮೆಲ್ಕಾರ್ ಸರಾ ಆರ್ಕೆಡ್ ಬಳಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ.
ಮೆಲ್ಕಾರ್ ಎಂ.ಸಿ.ಸಿ. ಬಾಯ್ಸಾ ಗೌರವಾಧ್ಯಕ್ಷ ರವಳನಾಥ ನಾಯಕ್ ಶಿಬಿರವನ್ನು ಉದ್ಘಾಟಿಸಲಿದ್ದು, ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಸದಸ್ಯ ಮುಬೀನ್ ಉಳ್ಳಾಲ ಅಧ್ಯಕ್ಷತೆ ವಹಿಸುವರು. ಇದೇ ವೇಳೆ ಟ್ರಾಫಿಕ್ ಎಸ್ಸೈ ಚಂದ್ರಶೇಖರಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.