ವಿಟ್ಲ : ಮಾ 19 ರಂದು ಕಲ್ಪನೆಯಲ್ಲಿ ಕಬಡ್ಡಿ ಪಂದ್ಯಾಟ
Update: 2016-03-17 17:24 IST
ವಿಟ್ಲ : ಬೋಳಂತೂರು ಕಲ್ಪನೆಯ ಸೆವೆನ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸಹಕಾರದೊಂದಿಗೆ 60 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟವು ಮಾರ್ಚ್ 19 ರಂದು ಕಲ್ಪನೆ ಸ್ಟಾರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದು, ರಾಷ್ಟ್ರೀಯ ತಂಡದ ಕಬಡ್ಡಿ ಆಟಗಾರ ಉದಯ ಕುಮಾರ್ ಚೌಟ ಪಂದ್ಯಾಟವನ್ನು ಉದ್ಘಾಟಿಸುವರು. ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ.ಎಸ್. ಮುಹಮ್ಮದ್, ತುಂಗಪ್ಪ ಬಂಗೇರ, ಮಂಜುಳಾ ಮಾಧವ ಮಾವೆ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಜೇತ ತಂಡಗಳಿಗೆ ಪ್ರಥಮ ರೂ. 7,016/-, ದ್ವಿತೀಯ ರೂ. 4,016/-, ತೃತೀಯ ಹಾಗೂ ಚತುರ್ಥ ರೂ. 2,016/- ಹಾಗೂ ಸೆವೆನ್ ಸ್ಟಾರ್ ಟ್ರೋಫಿ ಮತ್ತು ವೈಯುಕ್ತಿಕ ಬಹುಮಾನ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.