ಪುತ್ತೂರು ಜಾತ್ರೋತ್ಸವ ಆಮಂತ್ರಣ ಪತ್ರ ವಿವಾದಕ್ಕೆ ಶಾಸಕಿ ಶಕುಂತಳಾ ಶೆಟ್ಟಿಯೇ ಕಾರಣ: ಹೇಮನಾಥ ಶೆಟ್ಟಿ
Update: 2016-03-17 21:14 IST
ಮಂಗಳೂರು, ಮಾ.17: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಆಮಂತ್ರಣ ಪತ್ರದಲ್ಲಿ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಅವರ ಹೆಸರನ್ನು ಹಾಕಿರುವುದಕ್ಕೆ ಸಂಬಂಧಪಟ್ಟಂತೆ ಆಗಿರುವ ವಿವಾದಕ್ಕೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರೆ ಮೂಲ ಕಾರಣರಾಗಿದ್ದು ಅವರ ವಿರುದ್ದ ಮುಖ್ಯಮಂತ್ರಿಗೆ ದೂರು ಸಲ್ಲಿಸಲಾಗುವುದು ಎಂದು ಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮನಾಥ್ ಶೆಟ್ಟಿ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನರ ಭಾವನೆ ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರೊಬ್ಬ ಜನಪ್ರತಿನಿಧಿಯಾಗಿ ಜಿಲ್ಲಾಧಿಕಾರಿ ವಿರುದ್ದ ಮಾತನಾಡಿ ಸರಕಾರ ತಪ್ಪು ಮಾಡಿದೆ ಎಂದು ಬಿಂಬಿಸಿದರು ಎಂದು ಹೇಳಿದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಂಘಪರಿವಾರ ಅನಗತ್ಯ ಗೊಂದಲ ಸೃಷ್ಟಿಸಿದೆ. ಈ ಬಗ್ಗೆ ನಿಯೋಗದ ಮೂಲಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದೇವೆ. ಇನ್ನೆರಡು ದಿನಗಳಲ್ಲಿ ಗೊಂದಲ ಪರಿಹಾರವಾಗುವ ಭರವಸೆಯನ್ನು ಅವರು ನೀಡಿದ್ದಾರೆ ಎಂದು ಹೇಳಿದರು.