×
Ad

ಪ್ರಧಾನಿ ಕಾರ್ಯಾಲಯದಲ್ಲಿ ಸ್ವಚ್ಛತಾ ಕಾರ್ಯಾಚರಣೆ: ಹತ್ತು ಸಾವಿರ ಕಡತಗಳು ಹೊರಗೆ

Update: 2016-03-17 23:09 IST

ಹೊಸದಿಲ್ಲಿ, ಮಾ.17: ಸ್ವಚ್ಛ ಭಾರತ ಅಭಿಯಾನದಡಿ ಕೈಗೊಂಡಿದ್ದ ಪ್ರಧಾನ ಮಂತ್ರಿ ಕಾರ್ಯಾಲಯದ 15 ದಿನಗಳ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಬುಧವಾರ ಮುಕ್ತಾಯಗೊಂಡಿದೆ. ಈ ಸಂದರ್ಭದಲ್ಲಿ 10,000 ಸಾವಿರಕ್ಕೂ ಹೆಚ್ಚು ಕಡತಗಳನ್ನು ಹೊರಗೆ ಹಾಕಿ, ಸಂಗ್ರಹಿಸಿಡುವ ವೌಲ್ಯದ 1000 ಕಡತಗಳನ್ನು ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾಗೆ ವರ್ಗಾಯಿಸಲಾಗಿದೆ.ಪ್ರಧಾನ ಮಂತ್ರಿಯವರ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರ ನೇತೃತ್ವದಲ್ಲಿ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂಪ್ರೇರಿತರಾಗಿ, ಸಕ್ರಿಯವಾಗಿ ಭಾಗವಹಿಸುವ ಮೂಲಕ ಕಾರ್ಯಾಲಯದ ಪಶ್ಚಿಮ ದ್ವಾರದ ಎದುರಿನ ಲಾನ್‌ಗಳ ಸ್ವಚ್ಛತೆ ಹಾಗೂ ಸುಂದರೀಕರಣ, ಗುಜರಿ ಹಾಗೂ ಅನಗತ್ಯ ವಸ್ತುಗಳನ್ನು ತೆಗೆದು ಹಾಕುವುದು ಮತ್ತು ಇ-ತ್ಯಾಜ್ಯಗಳ ವಿಲೇವಾರಿಯೂ ನಡೆಯಿತು ಎಂದು ಪ್ರಕಟಣೆ ತಿಳಿಸಿದೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು ಪಿಎಂಒದ ಪರಿಶೀಲನೆ ನಡೆಸಿ ಸ್ವಚ್ಛತೆ ಉಳಿಸಿಕೊಳ್ಳುವ ಮೂಲಕ ಕೆಲಸದ ಗುಣಮಟ್ಟ ಹೆಚ್ಚಿಸಲು ಸೂಚಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News