ಉಮರ್ ಖಾಲಿದ್,ಅನಿರ್ಬನ್ ಭಟ್ಟಾಚಾರ್ಯ ಅವರಿಗೆ ಮಧ್ಯಾಂತರ ಜಾಮೀನು
ಹೊಸದಿಲ್ಲಿ, ಮಾ.18: ದಿಲ್ಲಿ ಜವಾಹರ್‌ಲಾಲ್ ನೆಹರೂ ವಿವಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಜೆಎನ್ ವಿವಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮುತ್ತು ಅನಿರ್ಬನ್ ಭಟ್ಟಾಚಾರ್ಯ ಅವರಿಗೆ ದಿಲ್ಲಿ ನ್ಯಾಯಾಲಯವು ಆರು ತಿಂಗಳ ಮಧ್ಯಾಂತರ ಜಾಮೀನು ನೀಡಿದೆ
.ಉಮರ್ ಖಾಲಿದ್ ಮುತ್ತು ಅನಿರ್ಬನ್ ಭಟ್ಟಾಚಾರ್ಯ ಅವರಿಗೆ ತಲಾ ಇಪ್ಪತ್ತೈದು ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತಾ ಖಾತರಿ ಯನ್ನು . ವಾರಗಳ ಒಳಗಾಗಿ ಪಾವತಿಸುವಂತೆ ದಿಲ್ಲಿ ನ್ಯಾಯಾಲಯ ಆದೇಶ ನೀಡಿದೆ.
ಇದೇ ಪ್ರಕರಣದಲ್ಲಿ ಈ ಮೊದಲು ಬಂಧಿತರಾಗಿದ್ದ ಜವಹಾರಲಾಲ್ ನೆಹರೂ ವಿವಿ ವಿದ್ಯಾರ್ಥಿ ಸಂಘದ ನಾಯಕ ಕನ್ಹೇಯಾ ಕುಮಾರ್ ಅವರಿಗೆ ನ್ಯಾಯಾಲಯವು ಜಾಮೀನು ಮೂಲಕ ಬಿಡುಗಡೆಗೊಳಿಸಿತ್ತು.
ಫೆ.9ರಂದು ಜವಾಹರ್‌ಲಾಲ್ ನೆಹರೂ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಮೂವರ ಬಂಧನವಾಗಿ ಮಧ್ಯಾಂತರ ಜಾಮೀನು ದೊರಕಿದೆ.