ಮೂಡುಬಿದಿರೆ ಕಾಳಿಕಾಂಬಾ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ಮೂಡುಬಿದಿರೆ: ಪ್ರತಿಯೊಬ್ಬ ಜನರು ಸಮಷ್ಠಿ ಹಿತದಿಂದ ಒಗ್ಗಟ್ಟಾಗಿ ಶ್ರಮಿಸಿದರೆ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಪರೋಪಕಾರ, ಸತ್ಕರ್ಮ ಮಾಡಿದಾಗ ದೇವರ ಅನುಗ್ರಹವಿರುತ್ತದೆ ಎಂದು ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠ ಬೆಳಗುತ್ತಿಮಠದ ಶ್ರೀ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ನುಡಿದರು.
ಅವರು ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಯಾವುದೇ ಧಾರ್ಮಿಕ ಕ್ಷೇತ್ರಗಳಲ್ಲಿ ವ್ಯಕ್ತಿನಿಷ್ಠೆ ಬಂದಾಗ ಅಲ್ಲಿ ವ್ಯವಸ್ಥೆ ಹಾಳಾಗುತ್ತದೆ ಎಂದವರು ನುಡಿದರು.
ಮುಖ್ಯ ಅತಿಥಿಯಾಗಿದ್ದ ಸಾಂಸದ ನಳಿನ್ ಕುಮಾರ್ ಅವರು ಮಾತನಾಡಿ ಕಲ್ಲಿನಲ್ಲಿ ಭಗವಂತನನ್ನು ಸೃಷ್ಟಿಸುವ ಅದ್ಭುತ ಶಕ್ತಿ ವಿಶ್ವಕರ್ಮರಲ್ಲಿದೆ. ಗುರುಸಾನಿಧ್ಯವಿರುವ ಈ ಪುಣ್ಯಸ್ಥಳದ ಅಭಿವೃದ್ಧಿಗಾಗಿ ಸಂಸದರ ನಿಧಿಯಿಂದ 5 ಲಕ್ಷ ರೂಪಾಯಿ ನೀಡುವುದಾಗಿ ಅವರು ಪ್ರಕಟಿಸಿದರು.
ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಮಾತನಾಡಿ ಈ ದೇವಸ್ಥಾನವನ್ನು ಸಮಾಜವು ಒಗ್ಗಟ್ಟಿನ ಮೂಲಕ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದೆ. ಕ್ಷೇತ್ರದ ಆಡಳಿತ ಮೊಕ್ತೇಸರ ಸುಂದರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇಮೂಈಶ್ವರ ಭಟ್, ಮುಂಬೈ ಉದ್ಯಮಿ ಶ್ರೀಧರ ಆಚಾರ್ಯ, ಮಂಗಳೂರು ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಲೋಕೇಶ್ ಆಚಾರ್ಯ, ಶ್ರೀಮದ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಪೀಠದ ಅಧ್ಯಕ್ಷ ತ್ರಾಸಿ ಸುಧಾಕರ ಆಚಾರ್ಯ, ಬೆಂಗಳೂರಿನ ದ.ಕ.ವಿಶ್ವಬ್ರಾಹ್ಮಣ ಸಂಘದ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ, ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಹರೀಶ್ ಆಚಾರ್ಯ, ಕೊಲೆಕಾಡಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ವಿಶ್ವನಾಥ ಆಚಾರ್ಯ, ಕಾಪು ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ, ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಬಡಾಕೆರೆ ಮಂಜುನಾಥ ಆಚಾರ್ಯ, ಗೋಕರ್ಣ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಮಧೂರು ಚಂದ್ರಶೇಖರ ಆಚಾರ್ಯ, ಭಟ್ಕಳ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಸದಾನಂದ ಎಂ. ಆಚಾರ್ಯ, ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಸುಂದರ ಆಚಾರ್ಯ, ಬಂಗ್ರಮಂಜೇಶ್ವರ ಕಾಳಿಕಾ ಪರಮೇಶ್ವರಿ ದೇವಸ್ಥಾನದ ಪೋಳ್ಯ ಉಮೇಶ್ ಆಚಾರ್ಯ, ಕಾರ್ಳೆ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಎ.ಸುಧಾಕರ ಆಚಾರ್ಯ, ಮಧೂರು ಕಾಳಿಕಾಂಬಾ ಮಠದ ಅಧ್ಯಕ್ಷ ಮೋಹನ ಆಚಾರ್ಯ ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಕೈಗಾರಿಕಾ ಕ್ಷೇತ್ರದ ಸಾಧಕ ಜಿ. ರಾಮಕೃಷ್ಣ ಆಚಾರ್, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಲ್ಪಿ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ನಿವೃತ್ತ ಶಿಕ್ಷಕಿ ಶ್ರೀಮತಿ ಗುಣವತಿ ಎಂ. ಅವರನ್ನು ಸನ್ಮಾನಿಸಲಾಯಿತು. ಹಾಗೂ ಬಹುಮುಖ ಪ್ರತಿಭೆಯ ರಂಗನಟ ಅಶೋಕ್ ಕುಮಾರ್ ಮುಂಬೈ ಹಾಗೂ ಸಚ್ಚೇರಿಪೇಟೆಯ ಕೂಡುವಳಿಕೆ ಮೊಕ್ತೇಸರ ರಮೇಶ್ ಆಚಾರ್ಯ ಅವರನ್ನು ಗೌರವಿಸಲಾಯಿತು. ಹಾಗೂ ಶೇ.100 ಶಿಸ್ತುಕಾಣಿಕೆ ಸಂಗ್ರಹಿಸಿದ ಕೂಡುವಳಿಕೆ ಮೊಕ್ತೇಸರರನ್ನು ಹಾಗೂ ಅತೀ ಹೆಚ್ಚು ಕಾಣಿಕೆ ಸಂಗ್ರಹಿಸಿದವರನ್ನು ಪುರಸ್ಕರಿಸಲಾಯಿತು. ಮೊಕ್ತೇಸರ ಜಯಕರ ಪುರೋಹಿತ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊಕ್ತೇಸರ ಬಾಲಕೃಷ್ಣ ಆಚಾರ್ಯ ಶಿಸ್ತುಕಾಣಿಕೆ ನೀಡಿದವರ ವಿವರ ನೀಡಿದರು. ಭಾಸ್ಕರ ಆಚಾರ್ಯ ಪಾಲ್ತಾಡಿ, ಬೆಳುವಾಯಿ ಸೀತಾರಾಮ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಬೆಳುವಾಯಿ ಭಾಸ್ಕರ ಆಚಾರ್ಯ ವಂದಿಸಿದರು.