ಯೋಜನೆ ಮತ್ತು ಪ್ರದೇಶಾಭಿವೃದ್ಧಿ
Update: 2016-03-18 23:39 IST
ಯೋಜನೆ ಮತ್ತು ಪ್ರದೇಶಾಭಿವೃದ್ಧಿ ಇಲಾಖೆಗೆ ಒಟ್ಟಾರೆ 1,816 ಕೋಟಿ ರೂ.ಒದಗಿಸಲಾಗಿದೆ. ರಾಜ್ಯದಲ್ಲಿರುವ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ 3 ಸಾವಿರ ಕೋಟಿ ರೂ.ಒದಗಿಸಲಾಗಿದೆ. ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1 ಸಾವಿರ ಕೋಟಿ ರೂ. ನೀಡಲಾಗಿದೆ. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ 50 ಕೋಟಿ ರೂ., ಬಯಲು ಸೀಮೆಯ ಅಭಿವೃದ್ಧಿ ಮಂಡಳಿಗೆ 45 ಕೋಟಿ ರೂ. ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 15 ಕೋಟಿ ರೂ.ಅನುದಾನ ಒದಗಿಸಲಾಗಿದೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಕಾರ್ಯಕ್ರಮಕ್ಕೆ 600 ಕೋಟಿ ರೂ. ಒದಗಿಸಲಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರು ನಗರದ ಮಾನವ ಅಭಿವೃದ್ಧಿ ವರದಿಯನ್ನು 2016-17ರಲ್ಲಿ ಸಿದ್ಧಪಡಿಸಲಾಗಿದೆ. ಸುಸ್ಥಿರ ಅಭಿವೃದ್ಧಿ ಗುರಿ-2030ನ್ನು ಆಧರಿಸಿ ರಾಜ್ಯದ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು.