×
Ad

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೊಸ ಯೋಜನೆಗಳು

Update: 2016-03-18 23:46 IST

 ಕರ್ನಾಟಕ ಏಕೀಕರಣದ 60ನೆ ವರ್ಷಾಚರಣೆಯ ಅಂಗವಾಗಿ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜನೆಗೆ 30 ಕೋಟಿ ರೂ.ಅನುದಾನ, ಕನ್ನಡದ ಪ್ರಮುಖ ಬರಹಗಳನ್ನು ಸಂರಕ್ಷಿಸಿ, ಗಣಕೀಕರಣಗೊಳಿಸಿ ವ್ಯಾಪಕವಾಗಿ ಪ್ರಸಾರ ಮಾಡುವ ಉದ್ದೇಶದಿಂದ ಅವುಗಳನ್ನು ಅಂತರ್ಜಾಲದಲ್ಲಿ ಪ್ರಕಟಿಸಲು 2.5 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಕರ್ನಾಟಕ ಥಿಯಾಲಾಜಿಕಲ್ ಕಾಲೇಜಿನ ಮೂಲಕ ಕನ್ನಡಕ್ಕೆ ಬಾಸೆಲ್ ಮಿಷನರಿಯ ಕೊಡುಗೆ ಎಂಬ ವಿಷಯದ ಕುರಿತು ಸಂಶೋಧನೆ ಕೈಗೆತ್ತಿಕೊಳ್ಳಲಾಗುವುದು. ಇದಕ್ಕಾಗಿ 2.5 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಮಂಗಳೂರಿನಲ್ಲಿ 2.5 ಕೋಟಿ ರೂ.ಗಳ ವೆಚ್ಚದಲ್ಲಿ ಕೊಂಕಣಿ ಸಂಸ್ಕೃತಿ ಕುರಿತ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ಸ್ಥಾಪನೆ. ಬೀದರ್ ಮತ್ತು ಬಾಗಲಕೋಟೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ವಸ್ತು ಸಂಗ್ರಹಾಲಯ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಸವಣೂರು ನವಾಬರ ಕಾಲದ ಪಾರಂಪರಿಕ ಕಟ್ಟಡಗಳ ಆಧುನೀಕರಣ ವಸ್ತು ಸಂಗ್ರಹಾಲಯವಾಗಿ ಪರಿವರ್ತನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News