×
Ad

ಸೈನಾ ನೆಹ್ವಾಲ್, ಪ್ರಣಯ್ ಕ್ವಾರ್ಟರ್ ಫೈನಲ್‌ಗೆ

Update: 2016-03-18 23:53 IST

ಸ್ವಿಸ್ ಓಪನ್ ಗ್ರಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್

ಬಾಸೆಲ್, ಮಾ.18:ಸ್ವಿಸ್ ಓಪನ್ ಗ್ರಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಕ್ರಮವಾಗಿ ಮಹಿಳೆಯರ ಹಾಗೂ ಪುರುಷರ ಸಿಂಗಲ್ಸ್ ಇವೆಂಟ್‌ನಲ್ಲಿ ನೇರ ಗೇಮ್‌ಗಳ ಅಂತರದಿಂದ ಗೆಲುವು ಸಾಧಿಸಿರುವ ಎರಡು ಬಾರಿಯ ಚಾಂಪಿಯನ್ ಸೈನಾ ನೆಹ್ವಾಲ್ ಹಾಗೂ ಎಚ್.ಎಸ್. ಪ್ರಣಯ್ ಕ್ವಾರ್ಟರ್-ಫೈನಲ್‌ಗೆ ತಲುಪಿದ್ದಾರೆ.

ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್‌ನ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಸೈನಾ ಝೆಕ್ ಗಣರಾಜ್ಯದ ಕ್ರಿಸ್ಟಿನಾ ಗಾವ್‌ಹೊಲ್ಟ್‌ರನ್ನು 21-18, 21-17 ಸೆಟ್‌ಗಳ ಅಂತರದಿಂದ ಮಣಿಸಿದರು. ಮುಂದಿನ ಸುತ್ತಿನಲ್ಲಿ ಜಪಾನ್‌ನ ಏಳನೆ ಶ್ರೇಯಾಂಕದ ಸಯಾಕಾ ಸಾಟೊರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ 13ನೆ ಶ್ರೇಯಾಂಕದ ಪ್ರಣಯ್ ಇಂಗ್ಲೆಂಡ್‌ನ ರಾಜೀವ್ ಒಸೆಫ್‌ರನ್ನು 21-13, 21-18 ಗೇಮ್‌ಗಳ ಅಂತರದಿಂದ ಮಣಿಸಿ ಶಾಕ್ ನೀಡಿದರು. ಪ್ರಣಯ್ ಕ್ವಾರ್ಟರ್‌ಫೈನಲ್‌ನಲ್ಲಿ ಥಾಯ್ಲೆಂಡ್‌ನ ಟನೊನ್‌ಸಕ್ ಸಾನ್‌ಸಾಮ್‌ಬೂನ್ಸ್ಸುಕ್‌ರನ್ನು ಎದುರಿಸಲಿದ್ದಾರೆ.

ಈಗಾಗಲೇ ಕ್ವಾರ್ಟರ್ ಫೈನಲ್‌ಗೆ ತಲುಪಿರುವ ಆರನೆ ಶ್ರೇಯಾಂಕದ ಪಿ.ವಿ.ಸಿಂಧು ಮುಂದಿನ ಸುತ್ತಿನಲ್ಲಿ ಚೀನಾದ ಹೇ ಬಿಂಗ್‌ಜಿಯಾವೊರನ್ನು ಎದುರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News