ಪುತ್ತೂರು:ಕಾರು - ಬೈಕ್ ಢಿಕ್ಕಿಸವಾರನಿಗೆ ಗಾಯ
Update: 2016-03-19 21:09 IST
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪುತ್ತೂರು ತಾಲೂಕಿನ ಸಂಟ್ಯಾರು ಎಂಬಲ್ಲಿ ನಡೆದಿದೆ.
ಬೈಕ್ ಸವಾರ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಶಿವಚಂದ್ರನ್ ಗಾಯಗೊಂಡ ವ್ಯಕ್ತಿ. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.