ಮಂಗಳೂರು:25ರಂದು ಪಿಲಿಕುಳದಲ್ಲಿ ಅರ್ಬನ್ ಹಾತ್ ಉದ್ಘಾಟನೆ
Update: 2016-03-19 23:23 IST
ಮಂಗಳೂರು, ಮಾ.19: ಭಾರತ ಸರ್ಕಾರದ ಜವಳಿ ಸಚಿವಾಲಯ, ಕರ್ನಾಟಕ ಸರ್ಕಾರದ ಕೈಗಾರಿಕಾ ಇಲಾಖೆ ಹಾಗೂ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಮಾ.25 ರಂದು ಬೆಳಗ್ಗೆ 11 ಗಂಟೆಗೆ ಪಿಲಿಕುಳದಲ್ಲಿ ಪಿಲಿಕುಳ ಅರ್ಬನ್ ಹಾತ್ ಸಂಕೀರ್ಣವನ್ನು ಕೇಂದ್ರ ಜವಳಿ ಸಚಿವರಾದ ಸಂತೋಷ್ ಕುಮಾರ್ ಗಂಗ್ವಾರ್ ಉದ್ಘಾಟಿಸುವರು.
ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ರಾಷ್ಟ್ರೀಯ ಮಟ್ಟದ ಕ್ರಾಫ್ಟ್ ಬಜಾರ್ ಉದ್ಘಾಟಿಸುವರು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಕ್ರೀಡಾ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.