×
Ad

ಕೊಣಾಜೆ: ಮೂಳೂರು ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಉತ್ಸವ ಆರಂಭ

Update: 2016-03-20 17:26 IST

ಕೊಣಾಜೆ: ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮೂಳೂರು ಶ್ರೀ ಮೂಲಾಪುರ ಶ್ರೀ ಪರಮೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ಶ್ರೀ ದೇವರ ಪುನಃಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾ.20ರಂದು ಆರಂಭಗೊಂಡಿದ್ದು ಮಾ.25ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ.
ಮಾ.21ರಂದು ಸೋಮವಾರ ಬೆಳಗ್ಗೆ 7ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬಳಿಕ ಪ್ರತಿದಿನ ಸಂಜೆ 5ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮಗಳಲ್ಲಿ ಅನುಕ್ರಮವಾಗಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಬಾಳೆಕೋಡಿ ಕನ್ಯಾನ ಶ್ರೀ ಕಾಳಭೈರವೇಶ್ವರ ಕ್ಷೇತ್ರದ ಶ್ರೀ ಶಶಿಕಾಂತಮಣಿ ಸ್ವಾಮೀಜಿ, ಒಡಿಯೂರು ಗುರುದೇವ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ. ವಿವಿಧ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಮಾ.25ರಂದು ಶುಕ್ರವಾರ ಬೆಳಗ್ಗೆ 9.30ರ ಚಿತ್ರಾ ನಕ್ಷತ್ರ ವೃಷಭ ಲಗ್ನದಲ್ಲಿ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಶ್ರೀ ದೇವರ ಪ್ರತಿಷ್ಠೆ ಹಾಗೂ ಪರಿವಾರ ದೇವತೆಗಳ ಪ್ರತಿಷ್ಠೆ, ಜೀವಕಲಶಾಬಿಷೇಕ, ಶಿಖರ ಪ್ರತಿಷ್ಠೆ, ಪರಿಕಲಶಾಭಿಷೇಕ, ಪಂಚಾಮೃತಾಭಿಷೇಕ, ಬ್ರಹ್ಮಕಲಶಾಭಿಷೇಕ, ಪ್ರತಷ್ಠಾಬಲಿ, ಮಹಾಪೂಜೆ, ಪ್ರಸಾದವಿತರಣೆಗಳು ನಡೆಯಲಿದೆ.
ಪ್ರತಿದಿನ ಅಪರಾಹ್ನ 1ರಿಂದ ಅನ್ನಸಂತರ್ಪಣೆ ಹಾಗೂ ರಾತ್ರಿ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ಮೂಲಾಪುರ ಪರಮೇಶ್ವರರ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಜಲ್ಲಿ ಈಶ್ವರ ಭಟ್ ಹಾಗೂ ಇತರ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News