×
Ad

ಪ್ರವಾಸಿ ತಾಣಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ

Update: 2016-03-20 23:26 IST

ಬೆಂಗಳೂರು, ಮಾ. 20: ರಾಜ್ಯದಲ್ಲಿ ಬೇಸಿಗೆ ರಜೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ಬೆಂಗಳೂರು ಕೇಂದ್ರೀಯ ವಿಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ಎಪ್ರಿಲ್ 1ರಿಂದ ವಿವಿಧ ರಾಜ್ಯಗಳ ಪ್ರವಾಸಿ ತಾಣಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ಬೆಂಗಳೂರಿನಿಂದ ಪಯ್ಯನೂರು, ಪಣಜಿ, ಕೊಡೈಕೆನಾಲ್, ಊಟಿ, ಶಿರಡಿ, ಮುಂಬೈ, ಚೆನ್ನೈ, ಕಡಲೂರು, ತಿರುಪತಿ, ಮಂತ್ರಾಲಯ, ಕುಮಿಲಿ, ಮುನ್ನಾರ್ ಮಾರ್ಗಗಳಲ್ಲಿ ಹೊಸದಾಗಿ ಸಾರಿಗೆಗಳನ್ನು ಈ ಕೆಳಕಂಡ ವೇಳಾಪಟ್ಟಿಯಂತೆ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುವುದು. ಮುಂಗಡ ಟಿಕೆಟ್ ಕಾಯ್ದಿರಿಸಲು 30ದಿನಗಳ ವರೆಗಿನ ಸೌಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-080-4959 666 ಸಂಪರ್ಕಿಸಬಹುದು. www.ksrtc.inಗೆ ಲಾಗ್‌ಅನ್ ಆಗಬಹುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News