‘ಮಹಿಳಾ ಅಸಮಾನತೆ ಇನ್ನೆಷ್ಟು ದಿನ’
Update: 2016-03-20 23:26 IST
ಬೆಂಗಳೂರು, ಮಾ.20: ಭಾರತಿಯ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವತಿಯಿಂದ ಮಾ.21ರಂದು ಬೆಳಗ್ಗೆ 11ಕ್ಕೆ ನಗರದ ಮಹಾರಾಣಿ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ‘ಮಹಿಳಾ ಅಸಮಾನತೆ, ಇನ್ನೆಷ್ಟು ದಿನ?’ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಜೆಎಂಎಸ್ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಲಕ್ಷ್ಮೀ, ಎಸ್‌ಎಫ್‌ಐ ಉಪಾಧ್ಯಕ್ಷ ಎಸ್.ಚಿಕ್ಕರಾಜು ಉಪಸ್ಥಿತರಿರುತ್ತಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.