×
Ad

ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

Update: 2016-03-20 23:39 IST

ಉಡುಪಿ, ಮಾ.20: ಎಸೆಸೆಲ್ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.40ರಷ್ಟು ಅಂಕಗಳಿಂದ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳಿಂದ ಹಾಗೂ ಶೇ.35ರಷ್ಟು ಅಂಕ ಪಡೆದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಮಂಗಳೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ನಾಲ್ಕು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು 20 ರೂ. ಅರ್ಜಿ ಶುಲ್ಕವನ್ನು ನೀಡಿ ಭರ್ತಿ ಮಾಡಿದ ಅರ್ಜಿಗಳನ್ನು ಎ.5ರೊಳಗೆ ಸಲ್ಲಿಸಬಹುದು. ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಬಾವುಟಗುಡ್ಡೆ, ಮಂಗಳೂರು-575003 (ದೂರವಾಣಿ:0824-2425873) ಸಂಪರ್ಕಿಸು ವಂತೆ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News