×
Ad

ಶಾಂತಿವನ ಟ್ರಸ್ಟ್‌ನ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆ

Update: 2016-03-20 23:40 IST

ಬೆಳ್ತಂಗಡಿ, ಮಾ.20: ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ನ 2015-16ನೆ ವಾರ್ಷಿಕ ಪ್ರಗತಿ ಪರಿಶೀಲನಾ ಸಭೆ ಧರ್ಮಸ್ಥಳ ಸನ್ನಿಧಿ ಸಭಾಂಗಣದಲ್ಲಿ ಟ್ರಸ್ಟ್ ಅಧ್ಯಕ್ಷ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ಟ್ರಸ್ಟ್‌ನ ಟ್ರಸ್ಟಿ ಹೇಮಾವತಿ ವೀ. ಹೆಗ್ಗಡೆ, ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಪ್ರಶಾಂತ ಶೆಟ್ಟಿ, ಡಾ.ಶಿವರಾಜ್ ಪಾಟೀಲ್, ಆಸ್ಪತ್ರೆಯ ವಿವಿಧ ವಿಭಾಗಗಳ ಡೀನ್‌ಗಳು, 10 ಸರಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳ ವ್ಯೆದ್ಯರು ಮತ್ತು ವ್ಯವಸ್ಥಾಪಕರು, ಶಾಂತಿವನ ಆಯುಷ್ ವಿಭಾಗದ ಆಡಳಿತಧಿಕಾರಿ ಮಂಜುನಾಥ ಎಂ. ಎನ್., ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ.ಐ. ಶಶಿಕಾಂತ್ ಜೈನ್, ಬೆಳ್ತಂಗಡಿ ಕಲ್ಯಾಣ ಮಂಟಪದ ಮುಖ್ಯಸ್ಥರು ತಮ್ಮ ವಾರ್ಷಿಕ ವರದಿಯನ್ನು ಮಂಡಿಸಿದರು. ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News