ವಿಧಾನಸೌಧಕ್ಕೆ ಇಂದು ಮುತ್ತಿಗೆ
Update: 2016-03-21 22:50 IST
ಬೆಂಗಳೂರು, ಮಾ.21 ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ವಕ್ಫ್ ಆಸ್ತಿ ಬಚಾವೋ ಆಂದೋಲನ-ವಿಧಾನಸೌಧ ಮುತ್ತಿಗೆ ಕಾರ್ಯಕ್ರಮವನ್ನು ಮಾ.22ರಂದು ಮಧ್ಯಾಹ್ನ 12ಕ್ಕೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡಾ.ಎನ್.ಎಫ್.ಮೊಹ್ಸಿನ್, ಬೆಂಗಳೂರು ಮಹಾನಗರ ಜಿಲ್ಲಾಧ್ಯಕ್ಷ ಸುಬ್ಬನರಸಿಂಹ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಎಸ್.ಮುನಿರಾಜು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.