×
Ad

2.ಚೀಟಿ ವ್ಯವಹಾರದಲ್ಲಿ ನಷ್ಟ: ಮಹಿಳೆ ಆತ್ಮಹತ್ಯೆ

Update: 2016-03-21 23:44 IST

ಬೆಂಗಳೂರು, ಮಾ. 21: ಚೀಟಿ ವ್ಯವಹಾರದಲ್ಲಿ ನಷ್ಟ ಉಂಟಾಗಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಬ್ರಹ್ಮಣ್ಯನಗರ ಇ-ಬ್ಲಾಕ್‌ನ 10ನೆ ಮುಖ್ಯ ರಸ್ತೆಯಲ್ಲಿರುವ ಬಿಡಿಡಿಸಿ ಕೋ-ಆಪರೇಟಿವ್ ಬ್ಯಾಂಕ್‌ನ ಮ್ಯಾನೇಜರ್ ರಮೇಶ್ ಎಂಬವರ ಪತ್ನಿ ಕುಸುಮಾ (44) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಚೀಟಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದ ಬೇಸತ್ತ ಕುಸುಮಾ ನಿನ್ನೆ ಬೆಳಗ್ಗೆ 10ರ ವೇಳೆಗೆ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸುಬ್ರಹ್ಮಣ್ಯ ನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News