×
Ad

ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ :ಓರ್ವ ಬಂಧನ

Update: 2016-03-22 21:44 IST

      ಮಂಗಳೂರು, ಮಾ. 22:ಮಂಗಳೂರು ನಗರದ ಬಿಜೈ ಕಾಪಿಕಾಡು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಎ.ಟಿ.ಎಂ ಬಳಿಯಲ್ಲಿ ಸಾರ್ವಜನಿಕರಿಂದ ಹಣವನ್ನು ಪಣವನ್ನಾಗಿಟ್ಟುಕೊಂಡು ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಒಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
          ಬಂಧಿತನನ್ನು ಬಿಜೈ ನ್ಯೂರೋಡ್ ನಿವಾಸಿ ಸಂತೋಷ್ ಕುಮಾರ್(27) ಎಂದು ಗುರತಿಸಲಾಗಿದೆ. ಆರೋಪಿಯು ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದ್ದ ವಿಶ್ವಕಪ್ 20-20 ಕ್ರಿಕೆಟ್ ಪಂದ್ಯಾವಳಿಯ ಸೋಲು ಗೆಲುವಿನ ಬಗ್ಗೆ ಸೋಮವಾರ ಸಂಜೆ ಮಂಗಳೂರು ನಗರದ ಬಿಜೈ ಕಾಪಿಕಾಡು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಎ.ಟಿ.ಎಂ ಬಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ. ಮಂಗಳೂರು ನಗರ ಅಪರಾಧ ಪತ್ತೆ ವಿಭಾಗ(ಸಿಸಿಬಿ) ಪೊಲೀಸರಿಗೆ ದೊರೆತ ಖಚಿತ ವರ್ತಮಾನದಂತೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
  ಬಂಧಿತ ಆರೋಪಿಯಿಂದ ರೂ. 13,000 ನಗದು, 1 ಮೊಬೈಲ್ ಪೋನ್, ಬೆಟ್ಟಿಂಗ್ ವ್ಯವಹಾರಗಳ ಬಗ್ಗೆ ಬರೆದಿರುವ ಚೀಟಿ ಯನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಸಿಸಿಬಿ ಪೊಲೀಸರು ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

        ಪೊಲೀಸ್ ಕಮೀಷನರ್ ಎಂ ಚಂದ್ರಶೇಖರ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಕೆ.ಎಂ. ಶಾಂತರಾಜು ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಡಾ ಸಂಜೀವ್ ಎಂ. ಪಾಟೀಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಇನ್ಸಪೆಕ್ಟರ್ ವೆಲೆಂಟೈನ್ ಡಿಸೋಜ ಮತ್ತು ಸಬ್ ಇನ್ಸಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News