×
Ad

ಚೆಂಬುಗುಡ್ಡೆ: ಪವರ್ ಕಟ್ ವಿರುದ್ಧ ಎಸ್‌ಡಿಪಿಐ ಧರಣಿ

Update: 2016-03-22 23:55 IST

ಉಳ್ಳಾಲ, ಮಾ, 22: ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿರುವ ಈ ದಿನ ಗಳಲ್ಲಿ ಅನಿಯಮಿತ ವಿದ್ಯುತ್ ನಿಲುಗಡೆ ಮಾಡುವ ಮೂಲಕ ರಾಜ್ಯ ಸರಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟ ವಾಡುತ್ತಿದೆ ಎಂದು ಎಸ್‌ಡಿಪಿಐ ರಾಜ್ಯ ಸದಸ್ಯ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ.

ಎಸ್‌ಡಿಪಿಐ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ಆಶ್ರಯದಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಉಳ್ಳಾಲ ಚೆಂಬುಗುಡ್ಡೆ ಯಲ್ಲಿ ಮೆಸ್ಕಾಂ ಕಚೇರಿ ಎದುರು ಹಮ್ಮಿಕೊಂಡಿದ್ದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

 ಕೈಗಾರಿಕೆಗಳಿಗೆ ನೀಡುವ ವಿದ್ಯುತ್ ಸ್ಥಗಿತಗೊಳಿಸಿ ವಿದ್ಯಾರ್ಥಿಗಳಿಗೆ ಪೂರಕ ವಾಗಿ ವಿದ್ಯುತ್ ನೀಡುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಎಸ್‌ಡಿಪಿಐ ಜಿಲ್ಲಾ ಸದಸ್ಯ ಅಶ್ರಫ್ ಮಂಚಿ, ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವಾಝ್ ಉಳ್ಳಾಲ, ಎಸ್‌ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಲತೀಫ್ ಕೋಡಿಜಾಲ್, ಉಪಾಧ್ಯಕ್ಷ ಇರ್ಶಾದ್ ಕೆ.ಸಿ.ರೋಡ್, ನೌಶಾದ್ ಕಲ್ಕಟ್ಟ ಉಪಸ್ಥಿತರಿದ್ದರು

 ಮಂಗಳೂರು ವಿಧಾನ ಸಭಾ ಪ್ರಧಾನ ಕಾರ್ಯದರ್ಶಿ ಹಾರಿಸ್ ಮಲಾರ್ ಸ್ವಾಗತಿಸಿದರು. ಕಾರ್ಯದರ್ಶಿ ಅಬ್ದುಲ್ ಖಾದರ್ ಅಮ್ಮೆಮಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News