×
Ad

ಮುಷ್ಕರ ಮುಂದೂಡಿಕೆ

Update: 2016-03-23 23:44 IST

ಬೆಂಗಳೂರು, ಮಾ.23: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ. 23ರಂದು ರಾಜ್ಯವ್ಯಾಪಿ ಕರೆ ನೀಡಲಾಗಿದ್ದ ಕರ್ನಾಟಕ ರಾಜ್ಯ ವಸತಿ ಶಾಲೆ ಮತ್ತು ನಿಲಯಗಳ ಬೋಧಕೇತರ ಸಿಬ್ಬಂದಿ ಮುಷ್ಕರವನ್ನು ಮುಂದೂಡಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ನಾಲ್ಕು ತಿಂಗಳಲ್ಲಿ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದೂಡಲಾಗಿದೆ.

ಎಲ್ಲ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕೆಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News